Bible Language

2 Kings 9:5 (LXXEN) English version of the Septuagint Bible

Versions

KNV   ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
ERVKN   ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.
IRVKN   ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.