Bible Language

Acts 7:45 (LXXEN) English version of the Septuagint Bible

Versions

KNV   ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
ERVKN   ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಹೊಸ ದೇಶದೊಳಗೆ ಹೋದಾಗ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.
IRVKN   ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.