Bible Language

Deuteronomy 5:9 (LXXEN) English version of the Septuagint Bible

Versions

KNV   ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
ERVKN   ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.
IRVKN   ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.