Versions
KNV ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
ERVKN ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
IRVKN ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.