Bible Language

Joshua 18:7 (LXXRP) Septugine Greek Old Testament with Grammar and Strong Code

Versions

KNV   ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.
ERVKN   ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.
IRVKN   ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು