Bible Language

2 Kings 8:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
ERVKN   ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.
IRVKN   ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.