Bible Language

1 Chronicles 20 (NASU) New American Standard Bible (Updated)

Versions

KNV   ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
ERVKN   ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆ ಹಾಕಿ ಸಂಪೂರ್ಣವಾಗಿ ನಾಶಮಾಡಿದರು.
IRVKN   {ದಾವೀದನು ರಬ್ಬ ಪಟ್ಟಣವನ್ನು ವಶಪಡಿಸಿಕೊಂಡಿದ್ದು} PS ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.