Bible Language

2 Chronicles 9 (NASU) New American Standard Bible (Updated)

Versions

KNV   ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
ERVKN   ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.
IRVKN   {ಶೆಬಾ ದೇಶದ ರಾಣಿಯು ಸೊಲೊಮೋನನ ಭೇಟಿಯಾದದ್ದು} PS ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.