Bible Language

2 Chronicles 14:8 (NASU) New American Standard Bible (Updated)

Versions

KNV   ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
ERVKN   ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.
IRVKN   ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು. PEPS