Bible Language

2 Samuel 16 (NASU) New American Standard Bible (Updated)

Versions

KNV   ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
ERVKN   ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.
IRVKN   {ಚೀಬನು ಅರಸನಿಗೆ ಆಹಾರ ತಂದದ್ದೂ} PS ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.