Bible Language

Genesis 14:23 (NASU) New American Standard Bible (Updated)

Versions

KNV   ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.
ERVKN   ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.
IRVKN   “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’