Bible Language

Hosea 8:13 (NCV) New Century Version

Versions

KNV   ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.
ERVKN   ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.
IRVKN   ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ;
ಯೆಹೋವನು ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು;
ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.