Bible Language

2 Kings 3:7 (NET) New English Translation

Versions

KNV   ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
ERVKN   ಯೋರಾವುನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.
IRVKN   ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.