Bible Language

2 Samuel 11 (NET) New English Translation

Versions

KNV   ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
ERVKN   ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.