Bible Language

Isaiah 2:3 (NET) New English Translation

Versions

KNV   ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ERVKN   ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
IRVKN   ಹೊರಟು ಬಂದ ಬಹು ಜನಾಂಗದವರು,
“ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ,
ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು.
ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.