Bible Language

Isaiah 61:3 (NET) New English Translation

Versions

KNV   ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ERVKN   ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.
IRVKN   ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,
ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.
ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.