Bible Language

1 Kings 16:34 (NLV) New Life Verson

Versions

KNV   ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
ERVKN   ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.”
IRVKN   ಯೆಹೋ. 6:26 ನೋಡಿರಿ. ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು. PE