Bible Language

2 Chronicles 13:11 (NLV) New Life Verson

Versions

KNV   ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
ERVKN   ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆ ಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದು ಬಿಟ್ಟಿದ್ದೀರಿ.
IRVKN   ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.