Bible Language

2 Kings 10:15 (NLV) New Life Verson

Versions

KNV   ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
ERVKN   ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ತನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.
IRVKN   ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.