Bible Language

2 Samuel 12:18 (NLV) New Life Verson

Versions

KNV   ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.
ERVKN   ಏಳನೆಯ ದಿನ ಮಗು ಸತ್ತಿತು. ಮಗು ಸತ್ತದ್ದನ್ನು ದಾವೀದನಿಗೆ ತಿಳಿಸಲು ಅವನ ಸೇವಕರು ಅಂಜಿದರು. ಅವರು, “ನೋಡಿ, ಮಗು ಜೀವಂತವಾಗಿರುವಾಗ ನಾವು ದಾವೀದನೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವನು ನಮ್ಮ ಮಾತನ್ನು ಕೇಳಲಿಲ್ಲ. ಮಗುವು ಸತ್ತಿತೆಂದು ನಾವು ದಾವೀದನಿಗೆ ತಿಳಿಸಿದರೆ, ಬಹುಶಃ ಅವನು ತನಗೆ ಏನಾದರೂ ಕೇಡು ಮಾಡಿಕೊಳ್ಳುತ್ತಾನೆ” ಎಂಬುದಾಗಿ ಮಾತಾಡಿಕೊಂಡರು.
IRVKN   ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.