Bible Language

Amos 2 (NLV) New Life Verson

Versions

KNV   ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
ERVKN   ಯೆಹೋವನು ಹೇಳುವದೇನಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.
IRVKN   {ಮೋವಾಬಿನ ಪಾಪಕ್ಕೆ ಆದ ದಂಡನೆ} PS ಯೆಹೋವನು ಇಂತೆನ್ನುತ್ತಾನೆ,
“ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ,
ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ.
ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.