Bible Language

Deuteronomy 1:17 (NLV) New Life Verson

Versions

KNV   ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
ERVKN   “ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.
IRVKN   ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.