Bible Language

Deuteronomy 5:22 (NLV) New Life Verson

Versions

KNV   ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
ERVKN   ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.
IRVKN   ಮಾತುಗಳನ್ನು ಯೆಹೋವನು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು. ಜನರ ದಿಗ್ಭ್ರಮೆ - ಮೋಶೆಯ ಮಧ್ಯಸ್ತಿಕೆ PEPS