Bible Language

Isaiah 6:11 (NLV) New Life Verson

Versions

KNV   ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ERVKN   ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.
IRVKN   ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು,
“ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ,
ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.