Bible Language

Revelation 8:13 (NLV) New Life Verson

Versions

KNV   ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
ERVKN   ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.
IRVKN   ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಪ್ರಕ 9:12; 11:14: ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು. PE