Bible Language

Lamentations 2:19 (RV) Revised Version

Versions

KNV   ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
ERVKN   ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆ ಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆ ಹೋಗುತ್ತಿದ್ದಾರೆ.