Bible Language

Luke 11:42 (RV) Revised Version

Versions

KNV   ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ERVKN   ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತು ಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.