Bible Language

1 Samuel 26:7 (WEB) World English Bible

Versions

KNV   ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
ERVKN   ರಾತ್ರಿಯಾಯಿತು. ದಾವೀದ ಮತ್ತು ಅಬೀಷೈ ಸೌಲನ ಪಾಳೆಯಕ್ಕೆ ಹೋದರು. ಪಾಳೆಯದ ಮಧ್ಯದಲ್ಲಿ ಸೌಲನು ನಿದ್ರಿಸುತ್ತಿದ್ದನು. ಅವನ ಭರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಸೌಲನ ಸುತ್ತಲೂ ಅಬ್ನೇರನು ಸೈನ್ಯದೊಡನೆ ನಿದ್ರಿಸುತ್ತಿದ್ದನು.
IRVKN   ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.