Versions
KNV ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
ERVKN ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.
IRVKN {ದಾವೀದನ ಕೊನೆಯ ಮಾತುಗಳು} PS ದಾವೀದನ ಕೊನೆಯ ಮಾತುಗಳು -
ಇಷಯನ ಮಗನಾದ ದಾವೀದನು,
ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು,
ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ,
ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು: