Versions
KNV ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
ERVKN “ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.