Bible Language

Psalms 39 (WEB) World English Bible

Versions

KNV   ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
ERVKN   “ನಾನು ಜಾಗರೂಕನಾಗಿ ಮಾತಾಡುವೆ. ನನ್ನ ನಾಲಿಗೆ ನನ್ನನ್ನು ಪಾಪಕ್ಕೆ ಸಿಕ್ಕಿಸದಂತೆ ನೋಡಿಕೊಳ್ಳುವೆ. ದುಷ್ಟರ ಮಧ್ಯದಲ್ಲಿ ಬಾಯಿಮುಚ್ಚಿಕೊಂಡಿರುವೆ” ಎಂದುಕೊಂಡೆನು.
IRVKN   “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,
ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.