Bible Language

Daniel 4:25 (YLT) Young's Literal Translation

Versions

KNV   ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಏಳು ಕಾಲಗಳು ಕಳೆದು ಹೋಗುವವು.
ERVKN   ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
IRVKN   ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.