Bible Language

Ezra 4:15 (YLT) Young's Literal Translation

Versions

KNV   ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
ERVKN   ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರು ಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವ ಕಾಲದಿಂದಲೂ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.
IRVKN   ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಕಾರಣದಿಂದಲೇ ಪಟ್ಟಣವು ನೆಲಸಮವಾಯಿತು ಎಂದು ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.