Versions
KNV ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
ERVKN ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.