Bible Versions
Bible Books

Exodus 29:21 (2JOHN_1_1)

Versions

KNV   ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
ERVKN   ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us