Versions
KNV ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
ERVKN ‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.