Versions
KNV ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ERVKN ಅರಸೇ, ಕೆಲವು ಜನ ಯೆಹೂದ್ಯರು ತಮ್ಮ ಆಜ್ಞೆಯನ್ನು ಪಾಲಿಸಲಿಲ್ಲ. ಆ ಯೆಹೂದ್ಯರನ್ನು ತಾವು ಬಾಬಿಲೋನ್ ಪ್ರಾಂತ್ಯದಲ್ಲಿ ಪ್ರಮುಖ ಅಧಿಕಾರಿಗಳನ್ನಾಗಿ ನೇಮಿಸಿದ್ದೀರಿ. ಅವರ ಹೆಸರುಗಳು, ಶದ್ರಕ್, ಮೇಶಕ್, ಅಬೇದ್ನೆಗೋ ಎಂದು. ಅವರು ನಿಮ್ಮ ದೇವರುಗಳನ್ನು ಪೂಜಿಸುವುದಿಲ್ಲ. ನೀವು ನಿಲ್ಲಿಸಿದ ಬಂಗಾರದ ವಿಗ್ರಹಕ್ಕೆ ಅಡ್ಡಬಿದ್ದು ಪೂಜಿಸುವದಿಲ್ಲ” ಎಂದು ಚಾಡಿ ಹೇಳಿದರು.