Versions
KNV ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
ERVKN ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.
IRVKN ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;