Versions
KNV ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ERVKN ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದುದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.
IRVKN {ಗಿಬ್ಯೋನ್ಯರು ಮುಯ್ಯಿ ತೀರಿಸಿದ್ದು} PS ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.