Versions
KNV ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
ERVKN ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೇತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,
IRVKN ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.