Versions
KNV ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
ERVKN ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೋ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೆ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.
IRVKN ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ * ಅಥವಾ ಮೂರು ವರ್ಷಗಳು. ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.