Versions
KNV ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
ERVKN ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದುದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.
IRVKN ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.