Versions
KNV ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ERVKN ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”
IRVKN ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು. PE