Bible Versions
Bible Books

Daniel 9:13 (AKJV) American King James Version

Versions

KNV   ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
ERVKN   ಎಲ್ಲ ಕೇಡುಗಳು ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.
IRVKN   ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us