Versions
KNV ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.
ERVKN ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದುದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು.
IRVKN ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.