Versions
KNV ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
ERVKN “ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದುದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.
IRVKN ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.