Bible Versions
Bible Books

Deuteronomy 4:34 (AKJV) American King James Version

Versions

KNV   ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
ERVKN   ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಟರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
IRVKN   ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us