Bible Versions
Bible Books

Esther 3:13 (AKJV) American King James Version

Versions

KNV   ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
ERVKN   ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.
IRVKN   ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us