Versions
KNV ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.
ERVKN ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.
IRVKN ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ * ಛೇಧಿಸು. ಪೆರೆಚ್” ಎಂದು ಹೆಸರಾಯಿತು.