Bible Versions
Bible Books

Joel 1:13 (AKJV) American King James Version

Versions

KNV   ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
ERVKN   ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆ ಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.
IRVKN   {ಜನರನ್ನು ಎಚ್ಚರಿಸಿ ಪ್ರಾರ್ಥನೆಗೆ ಆಹ್ವಾನಿಸಿದ್ದು} PS ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ!
ಯಜ್ಞವೇದಿಯ ಸೇವಕರೇ, ಗೋಳಾಡಿರಿ.
ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ.
ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us